ತುಮಕೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟಕ ಪ್ರಕರಣದಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ನಗರದ ಕುಣಿಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟ ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ಹೇಳಿದರು.
ನಮ್ಮ ಪೊಲೀಸರು ಹೋಗಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಸ್ಪೋಟಕ ಹೇಗೆ ಸಂಭವಿಸಿದೆ ಎಂಬುದಾಗಿ ತನಿಖೆಯಿಂದ ತಿಳಿದು ಬರಬೇಕಿದೆ ಎಂದರು.
ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ ಊಟದ ಸಮಯದಲ್ಲಿ ಸ್ಪೋಟಕ ಸಂಭವಿಸಿದೆ. ಐಇಡಿ ಸ್ಪೋಟದ ಬಗ್ಗೆ ಖಚಿತವಾಗಿ ಮಾಹಿತಿ ಸಿಕ್ಕಿಲ್ಲ. ಏನು ಸ್ಪೋಟವಾಗಿದೆ ಅಂತ ತನಿಖೆಯಿಂದ ತಿಳಿದುಬರಬೇಕಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ