ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತ ನಿಗೂಢ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಸುಧಾರಿತ ಐಇಡಿ ಬಳಸಿ ಸ್ಪೋಟಿಸಿರೋ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ.
ಇದಕ್ಕೆ ಪುಷ್ಟೀಕರಣ ಎನ್ನುವಂತೆ ಐಡಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸರು, ಎಫ್ಎಸ್ಎಲ್ ತಜ್ಞರ ತಂಡವು ಪರಿಶೀಲನೆ ನಡೆಸುತ್ತಿದೆ. ಶ್ವಾನದಳದ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ. ಪೊಲೀಸರು ಸಂಪೂರ್ಣ ತನಿಖೆಯನ್ನು ನಡೆಸುತ್ತಿದ್ದು, ತನಿಖೆಯ ನಂತ್ರ ಸ್ಪೋಟಕದ ಹಿಂದಿನ ಕಾರಣ ಏನು ಎಂಬುದು ತಿಳಿದು ಬರಬೇಕಿದೆ ಎಂದರು.
ಮತ್ತೊಂದೆಡೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ಪೋಟದ ಜಾಗದಲ್ಲಿ ಸಾಕ್ಷ್ಯ ಗಳ ಪರಿಶೀಲನೆ ಮಾಡುತ್ತಿರುವ ಪೊಲೀಸರು ಉಗ್ರರ ಕೃತ್ಯ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಐಇಡಿ (impoverished explossive device – ಸುಧಾರಿತ ಸ್ಪೋಟಕ್ಕೆ ಸಾಮಾಗ್ರಿ) ಬಳಕೆ ಮಾಡಿಕೊಂಡು ಸ್ಪೋಟ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ನಿಟ್ಟಿನಲ್ಲಿಯೂ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟಕ ಪ್ರಕರಣ: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme