ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದ್ದು, 2024ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-03-2024ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 14-04-2024 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದಿದೆ.
ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ https://www.kpsc.kar.nic.in ಗೆ ಭೇಟಿ ನೀಡಿ ಸಲ್ಲಿಸಬೇಕು.
ಅರ್ಹತೆ – ಈ ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸು ಸರ್ಕಾರಿ ನೌಕರರು ಆಗಿರಬೇಕು. ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪ್ರಾಧಿಕಾರಗಳ ಖಾಯಂ ನೌಕರರು ಆಗಿರಬೇಕು. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.