ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕಾರ್ಯವನ್ನು ನಡೆಸೋದಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಆ ಮಾರ್ಗಸೂಚಿ ಕ್ರಮದಂತೆ ಕ್ರಮವಹಿಸುವಂತೆ ಖಡಕ್ ಸೂಚನೆ ನೀಡಲಾಗಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ (Summative Assessment-(SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 11.03.2024 ರಿಂದ 18.03.2024 ರವರೆಗೆ ನಡೆಸಲಾಗುತ್ತಿದೆ. ಈ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾಗಿರುವುದು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು/ಸಿಬ್ಬಂದಿ ವರ್ಗದವರ ಪ್ರಮುಖ ಜವಾಬ್ದಾರಿಯಾಗಿರುತ್ತದೆ ಎಂದಿದೆ.
ವ್ಯಾಪ್ತಿ:-
• ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸಲಾಗುವುದು.
• 5 ನೇ ತರಗತಿ ವಿದ್ಯಾರ್ಥಿಗಳಿಗೆ 4 ವಿಷಯಗಳಿಗೆ, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 6 ವಿಷಯಗಳಿಗೆ ವಿಷಯವಾರು ಪ್ರಶ್ನೆಪತ್ರಿಕೆಗಳನ್ನು ನೀಡುವ ಮೂಲಕ ಮೌಲ್ಯಾಂಕನ ನಡೆಸಲಾಗುವುದು.
• 5 ನೇ ತರಗತಿಯ ವಿದ್ಯಾರ್ಥಿಗಳ ಸಂಖ್ಯೆ – 9,30,715
• 8 ನೇ ತರಗತಿಯ ವಿದ್ಯಾರ್ಥಿಗಳ ಸಂಖ್ಯೆ – 9,35,076
• 9ನೇ ತರಗತಿಯ ವಿದ್ಯಾರ್ಥಿಗಳ ಸಂಖ್ಯೆ- 9,48,313
• ಒಟ್ಟು ವಿದ್ಯಾರ್ಥಿಗಳ ಸಂಖ್ಯೆ – 28,14,104
• ಒಟ್ಟು ಶಾಲೆಗಳ ಸಂಖ್ಯೆ:- 69137
ಮಾಧ್ಯಮ:-ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತಮಿಳು, ತೆಲುಗು
ವಿಷಯ:-
5ನೇ ತರಗತಿಗೆ:- ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ.
ಪ್ರಥಮ ಭಾಷೆ:- ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಮರಾಠಿ, ತಮಿಳು, ತೆಲಗು.
ದ್ವಿತೀಯ ಭಾಷೆ:- ಕನ್ನಡ, ಇಂಗ್ಲಿಷ್ ಮತ್ತು ಇಂಗ್ಲಿಷ್ (Bilingual)
ಕೋರ್ ವಿಷಯ:- ಗಣಿತ, ಪರಿಸರ ಅಧ್ಯಯನ ಮತ್ತು ಗಣಿತ(Bilingual)
8 ಮತ್ತು 9ನೇ ತರಗತಿಗೆ:- ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ.
ಪ್ರಥಮ ಭಾಷೆ:-ಕನ್ನಡ, ಇಂಗ್ಲಿಷ್, ಇಂಗ್ಲಿಷ್ (NCERT), ಹಿಂದಿ, ಉರ್ದು, ಮರಾಠಿ, ತಮಿಳು, ತೆಲಗು, ಸಂಸ್ಕೃತ.
ದ್ವಿತೀಯ ಭಾಷೆ:-ಕನ್ನಡ ಮತ್ತು ಇಂಗ್ಲಿಷ್
ತೃತೀಯ ಭಾಷೆ:- ಕನ್ನಡ, ಇಂಗ್ಲಿಷ್, ಹಿಂದಿ, ಹಿಂದಿ(NCERT), ಉರ್ದು, ಸಂಸ್ಕೃತ, ಕೊಂಕಣಿ ಕನ್ನಡ ಮತ್ತು ದೇವನಾಗರಿ), ತುಳು, ಪರ್ಷಿಯನ್, ಅರೇಬಿಕ್,
9ನೇ ತರಗತಿ NSQF ವಿಷಯಗಳು: Automobile, Beauty & Wellness, Information Technology, Retail, Apparel made-ups & Home furnishing, Electronics and hardware.
ಕೋರ್ ವಿಷಯ:- ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ.
ಮೌಲ್ಯಾಂಕನ ಪ್ರಶ್ನೆಪತ್ರಿಕೆ ಸ್ವರೂಪ:
• 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುವುದು. • 5ನೇ ತರಗತಿಯ ವಿದ್ಯಾರ್ಥಿಗಳಿಗೆ ಉಲ್ಲೇಖ-4 ರ ಸುತ್ತೋಲೆಯಂತೆ ನವೆಂಬರ್-2023 ರ ಮಾಹೆಯಿಂದ ಫೆಬ್ರವರಿ- 2024 ರ ಮಾಹೆಯವರೆಗಿನ ಪಠ್ಯವಸ್ತುವನ್ನು ಆಧರಿಸಿ ಪ್ರಶ್ನೆಪತ್ರಿಕೆಗಳನ್ನು ರಚಿಸಲಾಗಿರುತ್ತದೆ.
• 5ನೇ ತರಗತಿಗೆ ಪ್ರತಿ ವಿಷಯಕ್ಕೆ 50 ಅಂಕಗಳಿಗೆ ಮೌಲ್ಯಾಂಕನ ನಡೆಸಲಾಗುವುದು. 40 ಅಂಕಗಳ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುವುದು ಮತ್ತು 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ
ನಿರ್ವಹಿಸುವುದು.
• 5ನೇ ತರಗತಿಯ ಪ್ರತಿ ವಿಷಯದ ಮೌಲ್ಯಾಂಕನಕ್ಕೆ 2 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.
• 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಲ್ಲೇಖ-4 ರ ಸುತ್ತೋಲೆಯಂತೆ ಜೂನ್-2023 ರ ಮಾಹೆಯಿಂದ ಫೆಬ್ರವರಿ-2024 ರ ಮಾಹೆಯವರೆಗಿನ ವಾರ್ಷಿಕ ಪಠ್ಯವಸ್ತುವನ್ನು ಆಧರಿಸಿ ಪ್ರಶ್ನೆಪತ್ರಿಕೆಗಳನ್ನು ರಚಿಸಲಾಗಿರುತ್ತದೆ.
• 8ನೇ ತರಗತಿಗೆ ಪ್ರತಿ ವಿಷಯಕ್ಕೆ 60ಅಂಕಗಳಿಗೆ ಮೌಲ್ಯಾಂಕನ ನಡೆಸಲಾಗುವುದು. 50 ಅಂಕಗಳ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುವುದು ಮತ್ತು 10 ಅಂಕಗಳಿಗೆ ಮೌಖಿಕ ಪರೀಕ್ಷೆಯನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸುವುದು.
• 8ನೇ ತರಗತಿಯ ಪ್ರತಿ ವಿಷಯದ ಮೌಲ್ಯಾಂಕನಕ್ಕೆ 2.30 ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ.
• ವಿ.ಸೂಚನೆ: 8ನೇ ತರಗತಿಯ ದೈಹಿಕ ಶಿಕ್ಷಣ ವಿಷಯಕ್ಕೆ ಸಂಬಂಧಿಸಿದಂತೆ ಮೌಖಿಕ ಪರೀಕ್ಷೆ ಇಲ್ಲವಾದ ಕಾರಣ ಮೌಲ್ಯಾಂಕನವನ್ನು 50 ಅಂಕಗಳಿಗೆ ಬದಲಾಗಿ 60 ಅಂಕಗಳಿಗೆ ನಿಗದಿಪಡಿಸಲಾಗಿದೆ.
• 9ನೇ ತರಗತಿಯ ವಿದ್ಯಾರ್ಥಿಗಳಿಗೆ ಉಲ್ಲೇಖ-4 ರ ಸುತ್ತೋಲೆಯಂತೆ ಆಯಾ ಭಾಷೆ ಹಾಗೂ ಕೋರ್ ವಿಷಯಗಳಿಗೆ ನಿಗದಿಪಡಿಸಿದ ವಾರ್ಷಿಕ ಪಠ್ಯವಸ್ತುವನ್ನು ಆಧರಿಸಿ ಪ್ರಶ್ನೆಪತ್ರಿಕೆಗಳನ್ನು ರಚಿಸಲಾಗಿರುತ್ತದೆ.
• 9ನೇ ತರಗತಿಯ ಪ್ರಥಮ ಭಾಷಾ ವಿಷಯಕ್ಕೆ 100 ಅಂಕಗಳಿಗೆ ಲಿಖಿತ ಪರೀಕ್ಷೆ ಉಳಿದ ವಿಷಯಗಳಾದ ದ್ವಿತೀಯ, ತೃತೀಯ ಭಾಷೆ ಹಾಗೂ ಕೋರ್ ವಿಷಯಗಳಿಗೆ 80 ಅಂಕಗಳ ಲಿಖಿತ ಪರೀಕ್ಷೆಗೆ ರಾಜ್ಯ ಹಂತದಿಂದ ಪ್ರಶ್ನೆಪತ್ರಿಕೆಗಳನ್ನು ನೀಡಲಾಗುವುದು.