ಬೆಂಗಳೂರು: ನಗರ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಾಳುಗಳಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಗಾಯಾಳುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಲಿದ್ದಾರೆ.
ಈ ಕುರಿತಂತೆ ರಾಜ್ಯಪಾಲರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಗೊಂಡು ವೈದೇಹಿ ಹಾಗೂ ಬ್ರೂಕ್ ಫೀಲ್ಡ್ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ದಾಖಲಾಗಿರುವಂತ ಗಾಯಾಳುಗಳನ್ನು ಭೇಟಿಯಾಗಲಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಅಲ್ಲದೇ ಘಟನೆಯ ಸಂಬಂಧ ಮಾಹಿತಿಯನ್ನು ಪಡೆಯಲಿದ್ದಾರೆ ಎಂಬುದಾಗಿ ತಿಳಿಸಿದೆ.
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ