ಬೆಂಗಳೂರು: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು.
ಪ್ರಹ್ಲಾದ್ ಜೋಷಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಈ ಘಟನೆ ಅತ್ಯಂತ ದುರ್ದೈವದ ಘಟನೆ ಮತ್ತು ಖಂಡನೀಯ ಎಂದು ತಿಳಿಸಿದರು. ತುಷ್ಟೀಕರಣದ ರಾಜಕೀಯದಿಂದ ಇಂಥ ಸಮಸ್ಯೆ ಆಗುತ್ತಿದೆ ಎಂದು ಅವರು ಆಕ್ಷೇಪಿಸಿದರು.
ಎನ್.ಐ.ಎ. ತನಿಖೆ ನಡೆಸಲು ರಾಜ್ಯ ಸರಕಾರ ಕೇಳಿದರೆ ಅದಕ್ಕೆ ಸಹಕಾರ ಕೊಡಲು ನಾವು ಸಿದ್ಧರಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ಸಿನ ಬಿ.ಕೆ.ಹರಿಪ್ರಸಾದ್ ಅವರ ಮಾತುಗಳು, ಸರಕಾರದ ಕಾರ್ಯವೈಖರಿ ‘ಪಾಕಿಸ್ತಾನ್ ಜಿಂದಾಬಾದ್’ ಎನ್ನಲು ಕುಮ್ಮಕ್ಕು ನೀಡಿದೆ ಎಂದು ಅವರು ನುಡಿದರು.
‘ನಮಗೆ ಪಾಕಿಸ್ತಾನ ವೈರಿ ಅಲ್ಲ’ ಎನ್ನುತ್ತಾರೆ. ಅಂದರೆ ಮುಂಬೈ ಬ್ಲಾಸ್ಟ್ ಆದಾಗ ಅವರು ವೈರಿ ಆಗಿರಲಿಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ