ಬೆಂಗಳೂರು : ನಗರದ ರಾಮೇಶ್ವರಂ ಕೆಫೆ ಹೊಟೆಲ್ ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ಕೇಂದ್ರ ಗುಪ್ತಶರ ಇಲಾಖೆಯ ಭೇಟಿ ನೀಡಿ ಸ್ಥಳದಲ್ಲಿ ಸ್ಯಾಂಪಲ್ ಗಳನ್ನು ಸಂಗ್ರಹಿಸಿದೆ ಎಂದು ತಿಳಿದುಬಂದಿದೆ.
‘ಪಂಚಮಿತ್ರ’ ಪೋರ್ಟಲ್ ಲೋಕಾರ್ಪಣೆ: ಇನ್ಮುಂದೆ ಗ್ರಾಮ ಪಂಚಾಯ್ತಿಯ ಈ ಸೇವೆಗಳು ‘ಆನ್ ಲೈನ್’ನಲ್ಲೇ ಲಭ್ಯ
ರಾಮೇಶ್ವರಂ ಕೆಫೆಗೆ ತಡರಾತ್ರಿ ಕೇಂದ್ರ ಗುಪ್ತಚರ ಇಲಾಖೆ ಭೇಟಿ ನೀಡಿದೆ ರಾಮೇಶ್ವರಂ ಕೆಫೆಯಲ್ಲಿ ಪರಿಶೀಲನೆ ನಡೆಸಿ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದು ಪ್ರಕರಣದ ಗಂಭೀರತೆ ಅರಿತು ಕೇಂದ್ರ ತನಿಖ ತಂಡಗಳು ಭೇಟಿ ನೀಡಿವೆ. FSL ತಂಡ, NIA ತಂಡ, ಐ ಬಿ ತಂಡ ಭೇಟಿ ನೀಡಿ ಸ್ಥಳದಲ್ಲಿ ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂದು ಹೇಳಲಾಗುತ್ತಿದೆ.
ರಾಮೇಶ್ವರಂ ಕೆಫೆ ಸ್ಫೋಟ ಘಟನೆಯನ್ನು NIA ತನಿಖೆಗೆ ಒಪ್ಪಿಸಿ:ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗ್ರಹ
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದು, ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಶಂಕೆ ಮೇರೆಗೆ ವಿಚಾರಣೆಗೆ ಒಳಪಡಿಸಲಾಗಿದ್ದವರ ಪೈಕಿ ಓರ್ವ ಶಂಕಿತ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಾರ್ಚ್.11ರಿಂದ 5, 8 ಮತ್ತು 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ಶಿಕ್ಷಣ ಇಲಾಖೆಯಿಂದ ‘ಮಾರ್ಗಸೂಚಿ’ ಪ್ರಕಟ
ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ ಟೋಪಿ ಹಾಕಿಕೊಂಡು ರಾಮೇಶ್ವರಂ ಕೆಫೆ ಪ್ರವೇಶಿಸಿದ್ದಾನೆ. ಹೊಟೇಲ್ ನಲ್ಲಿ ಸ್ವಲ್ಪ ಹೊತ್ತು ಗಮನಿಸಿ ಕಾಲ ಕಳೆದಿದ್ದಾನೆ. ನಂತರ ತಿಂಡಿ ತಿಂದು ಬ್ಯಾಗ್ ವೊಂದನ್ನ ಹ್ಯಾಂಡ್ ವಾಷ್ ಬಳಿ ಇರಿಸಿದ್ದಾನೆ. ಅಲ್ಲಿಂದ ಕೆಫೆ ಸಮೀಪದಲ್ಲಿರೋ ನಿಲ್ದಾಣದಿಂದ ಬಸ್ ಹತ್ತಿ ತೆರಳಿರೋ ಸಾಧ್ಯೆತೆಗಳಿವೆ.