ಬೆಂಗಳೂರು : ನಾಳೆಯಿಂದ ಮಾರ್ಚ್ 6ರವರೆಗೆ ರಾಷ್ಟ್ರೀಯ ಪಲ್ಸ್ ಪೊಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಿದೆ.
UPDATE : ರಾಮೇಶ್ವಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ : ತಡರಾತ್ರಿ ಭೇಟಿ ನೀಡಿದ ‘ಕೇಂದ್ರ ಗುಪ್ತಚರ ಇಲಾಖೆ’
ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ.
‘ಪಂಚಮಿತ್ರ’ ಪೋರ್ಟಲ್ ಲೋಕಾರ್ಪಣೆ: ಇನ್ಮುಂದೆ ಗ್ರಾಮ ಪಂಚಾಯ್ತಿಯ ಈ ಸೇವೆಗಳು ‘ಆನ್ ಲೈನ್’ನಲ್ಲೇ ಲಭ್ಯ
ಬಿಬಿಎಂಪಿಯ 145 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 228 ನಮ್ಮ ಕ್ಲಿನಿಕ್‌ಗಳಲ್ಲಿ, ಔಷಧಾಲಯಗಳು, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಹಾಗೂ ಸ್ಥಿರ ಮತ್ತು ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸ್ವಯಂ ಸೇವಾ ಸಂಸ್ಥೆಯ ಆಸ್ಪತ್ರೆಗಳು, ಮಾಲ್‌ಗಳು, ಖಾಸಗಿ ನರ್ಸಿಂಗ್ ಹೋಮ್ ಗಳು, ವೈದ್ಯಕೀಯ ಮಹಾವಿದ್ಯಾಲಯ, ಪ್ರಮುಖ ಉದ್ಯಾನವನಗಳು, ಮೆಟ್ರೋ ನಿಲ್ದಾಣ ಇನ್ನು ಮುಂತಾದ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಬೂತ್ ರಚಿಸಲಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಘಟನೆಯನ್ನು NIA ತನಿಖೆಗೆ ಒಪ್ಪಿಸಿ:ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗ್ರಹ
ಪ್ರವಾಸಿ ಸ್ಥಳಗಳು, ಜನಸಂದಣಿ ಹೆಚ್ಚು ಇರುವ ಕಡೆ ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಲಸಿಕಾ ಕಾರ್ಯಕರ್ತೆಯರು ಇಲ್ಲಿ ಕಂಡು ಬರುವ ಮಕ್ಕಳಿಗೆ ಲಸಿಕೆಯನ್ನು ನೀಡುವರು. ಎಲ್ಲಾ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಟ್ರಾನ್ಸಿಟ್ ಬೂತ್‍ಗಳನ್ನು ತೆರೆಯಲಾಗುವುದು. ಒಂದರಿಂದ ನಾಲ್ಕನೇ ದಿನದವರೆಗಿನ ದಿನಗಳಲ್ಲಿ ಸಂತೆ ನಡೆಯುವ ಸ್ಥಳಗಳಲ್ಲಿ ಸಹ ಟ್ರಾನ್ಸಿಟ್ ಬೂತ್‍ಗಳನ್ನು ತೆರೆದು ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುವುದು.
ನಗರದ 5 ವರ್ಷದೊಳಗಿನ 11.12 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಲಾಗಿದೆ. ಅದಕ್ಕಾಗಿ 3,403 ಬೂತ್, 545 ಸ್ಥಿರ ಹಾಗೂ 380 ಸಂಚಾರಿ ತಂಡ ರಚಿಸಲಾಗಿದೆ. 15,354 ಲಸಿಕಾ ಕಾರ್ಯಕರ್ತರು ಹಾಗೂ 758 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.