ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರು ಕೆಫೆ “ಐಇಡಿ ಸ್ಫೋಟ’: ಗಾಯಗೊಂಡ ಮಹಿಳೆಗೆ 3.5 ಗಂಟೆಗಳ ಶಸ್ತ್ರಚಿಕಿತ್ಸೆ
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದು, ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು.
ಸಂಪುಟದಲ್ಲಿ ಚರ್ಚಿಸಿದ ಬಳಿಕ ‘ಜಾತಿಗಣತಿ’ ವರದಿ ತೀರ್ಮಾನ : ಸಿಎಂ ಸಿದ್ದರಾಮಯ್ಯ ಹೇಳಿಕೆ
ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು.
BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು