ಬೆಂಗಳೂರು: ಶುಕ್ರವಾರ ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ಇಂದು ವಿಚಾರಿಸಿದರು. ಮೈಸೂರಿನಿಂದ ನೇರವಾಗಿ ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆಗೆ ಆಗಮಿಸಿದ ಅವರು, ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್
ಈ ನಡುವೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು SIT ತನಿಖೆಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಭೆಯಲ್ಲಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಐಜಿ ಅಲೋಕ್ ಕುಮಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದಾರೆ.