ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ.
ನಿನ್ನೆ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿರುವಂತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಹತ್ವದ ಸಭೆಯನ್ನು ಗೃಹ ಇಲಾಖೆಯ ಅಧಿಕಾರಿಗಳ ಜೊತೆಗೆ ನಡೆಸುತ್ತಿದ್ದಾರೆ. ಈ ಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗಿಯಾಗಿರೋದಾಗಿ ತಿಳಿದು ಬಂದಿದೆ.
ಕಾವೇರಿ ನಿವಾಸದಲ್ಲಿನ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಸಿಎಂ ಸಿದ್ಧರಾಮಯ್ಯ ಪಡೆಯುತ್ತಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
‘ಗೂಗಲ್ ಪ್ಲೇ ಸ್ಟೋರ್’ನಿಂದ ‘ಭಾರತೀಯ ಅಪ್ಲಿಕೇಶನ್’ಗಳಿಗೆ ಗೇಟ್ ಪಾಸ್ : ‘ಕೇಂದ್ರ ಸರ್ಕಾರ’ ಮೊದಲ ಪ್ರತಿಕ್ರಿಯೆ