ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ ಯಾರನ್ನು ಬಂಧಿಸಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದ್ದಾರೆ.
ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದೆ.
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
ಇನ್ನೂ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ. https://t.co/sle7T39aSg
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
BREAKING: ‘ಕೆಫೆ ಬಾಂಬ್ ಸ್ಪೋಟ’ ಕೇಸ್: ‘ಓರ್ವ ಗಾಯಾಳು’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೇಂದ್ರ ಸರ್ಕಾರದ ಮದ್ಯಪ್ರವೇಶ: ‘ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘Naukri, 99acres ಆ್ಯಪ್’ ಮರು ಸೇರ್ಪಡೆ