ನವದೆಹಲಿ : 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಇಂದು ಸಂಜೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ತಡರಾತ್ರಿ ಸಭೆ ನಡೆಸಿದ ಕೆಲವು ದಿನಗಳ ನಂತರ ಸಂಜೆ 6 ಗಂಟೆಗೆ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಈ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಂತಹ ಪ್ರಮುಖರನ್ನ ಒಳಗೊಂಡ 100ಕ್ಕೂ ಹೆಚ್ಚು ಹೆಸರುಗಳನ್ನು ಬಿಜೆಪಿ ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ.
ಅಂದ್ಹಾಗೆ, ಅಭ್ಯರ್ಥಿಗಳ ಹೆಸರನ್ನ ಚರ್ಚಿಸಲು ಫೆಬ್ರವರಿ 29 ರಂದು ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯು ರಾತ್ರಿ 8 ಗಂಟೆಗೆ ಪ್ರಾರಂಭವಾಗಿ ಬೆಳಗಿನ ಜಾವ 4 ಗಂಟೆಯವರೆಗೆ ನಡೆಯಿತು. ಇದರಲ್ಲಿ ಪಿಎಂ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ಭಾರತೀಯ ನಾಯಕರು ಭಾಗವಹಿಸಿದ್ದರು. ಸುಮಾರು 17 ರಾಜ್ಯಗಳ ಲೋಕಸಭೆ ಸ್ಥಾನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, 155ಕ್ಕೂ ಹೆಚ್ಚು ಸ್ಥಾನಗಳ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ಇಂದು ನಡೆಯಲಿರುವ ಬಿಜೆಪಿ ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಸರ್ಕಾರ ಮಧ್ಯ ಪ್ರವೇಶಿಸುತ್ತಿದ್ದಂತೆ ’99 ಎಕರೆ ಆಪ್, ಗೂಗಲ್ ಪ್ಲೇ ಸ್ಟೋರ್’ನಲ್ಲಿ ಮರುಸ್ಥಾಪನೆ
BREAKING: ‘ಕೆಫೆ ಬಾಂಬ್ ಸ್ಪೋಟ’ ಕೇಸ್: ‘ಓರ್ವ ಗಾಯಾಳು’ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್
Watch Video : ನಗರ ಸಹಕಾರಿ ಬ್ಯಾಂಕುಗಳ ‘ಅಂಬ್ರೆಲಾ ಆರ್ಗನೈಸನ್’ಗೆ ಗೃಹ ಸಚಿವ ಅಮಿತ್ ಶಾ ಚಾಲನೆ