ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆ-2024 ಘೋಷಣೆಗೂ ಮುನ್ನವೇ ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ತೀವ್ರ ಕುತೂಹಲದ ನಡುವೆ ಬಿಡುಗಡೆ ಮಾಡಲಾಗಿರುವಂತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಘಟಾನುಘಟಿ ನಾಯಕರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ.
ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವನ್ನು ಬಿಜೆಪಿ ಒಳಗೊಂಡಿದೆ ಎಂದರು.
10 ವರ್ಷಗಳಿಂದ ಮೋದಿ ಸರ್ಕಾರವಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 195 ಕ್ಷೇತ್ರಗಳಿಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿದೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು.
ಯುವಕರು 47, ಅನುಸೂಚಿತ ಜಾತಿಯ 27, ಎಸ್ಟಿ ವರ್ಗದವರಿಗೆ 18, ಇತರೆ ವರ್ಗದ 57 ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲಾ ವರ್ಗಾದವರಿಗೂ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದರು.
BIG UPDATE: ರಾಮೇಶ್ವರಂ ‘ಕೆಫೆ ಬಾಂಬ್ ಬ್ಲಾಸ್ಟ್’ ಪ್ರಕರಣ: ‘FSL ತನಿಖೆ’ಯಲ್ಲಿ ಮತ್ತೊಂದು ‘ಸ್ಪೋಟಕ ಮಾಹಿತಿ’ ಲಭ್ಯ
ಕೇಂದ್ರ ಸರ್ಕಾರದ ಮದ್ಯಪ್ರವೇಶ: ‘ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘Naukri, 99acres ಆ್ಯಪ್’ ಮರು ಸೇರ್ಪಡೆ