ನವದೆಹಲಿ: ಲೋಕಸಭಾ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿಪ್ರಕಟ ಮಾಡಲಾಗಿದೆ. ಇಂದು ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಬಿಜೆಪಿ ನಾಯಕರು ಬಿಡುಗಡೆ ಮಾಡಿದರು. ಇನ್ನೂ ಈ ಬಾರಿ ಕೂಡ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂಧ್ರ ಮೋದಿಯವರು ವಾರಣಾಸಿಯಿಂದ ಸ್ಪರ್ಧೆ ಮಾಡಲಾಗಿದ್ದಾರೆ.
ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವ ಮೊದಲು ಆಡಳಿತ ಪಕ್ಷವು ಗಣನೀಯ ಸಂಖ್ಯೆಯ ಅಭ್ಯರ್ಥಿಗಳನ್ನು ಘೋಷಿಸಲು ಬಯಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ನಡೆಸಿತ್ತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪಿಎಂ ಮೋದಿ ಸೇರಿದಂತೆ ಪಾರ್ಟಿ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು. ಅದಾದ ಬಳಿಕ ಇಂದು ಪಟ್ಟಿ ಬಿಡುಗಡೆಯಾಗಿದೆ.