ಬೆಂಗಳೂರು: ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ಒಯ್ಯುತ್ತಾರೆ. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವರು ಇರುವುದಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಆದ್ದರಿಂದ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು ಮತ್ತು ಕಡತಗಳನ್ನು ಆನ್ಲೈನ್ ಮೂಲಕ ಕಳುಹಿಸಲು ಅವರಿಗೆ ಇ-ಆಫೀಸ್ ಲಾಗ್ಇನ್ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಗ್ರಾಮ ಲೆಕ್ಕಿಗರು ತಮ್ಮ ಕಚೇರಿಯಲ್ಲೇ ಇದ್ದು ಎಲ್ಲ ಕೆಲಸಗಳನ್ನು ಮಾಡಲು ಮತ್ತು ಪ್ರತಿ ನಿತ್ಯ ತಾಲ್ಲೂಕು ಕಚೇರಿಗಳಿಗೆ ಹೋಗುವುದನ್ನು ತಪ್ಪಿಸಲು 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ಟಾಪ್ ವಿತರಿಸಲಾಗುವುದು ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.