ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮತ್ತು ಮತದಾನಕ್ಕೆ ಗೈರು ಹಾಜರಾಗಿದ್ದ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಅವರಿಗೆ ಬಿಜೆಪಿ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
BREAKING : ಕಾಂಗ್ರೆಸ್ ಗೆ ‘ಬಿಗ್ ಶಾಕ್’ : ಮಾಜಿ ಸಚಿವ ಮನೋಹರ್ ತಹಸೀಲ್ದಾರ್ ‘ಕೈ’ ಬಿಟ್ಟು ಬಿಜೆಪಿ ಸೇರ್ಪಡೆ
ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಇಬ್ಬರಿಗೂ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಅದರಲ್ಲಿ, ಮಾರ್ಚ್ 5ರೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಿಮಗೆ ಬೆಂಗಳೂರಲ್ಲಿ ‘ಕೆರೆ ರಕ್ಷಣೆ’ ಮಾಡೋ ಉದ್ದೇಶ ಇದ್ಯಾ.? ಇಲ್ಲಿದೆ ಸುವರ್ಣಾವಕಾಶ
ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಸೋಮಶೇಖರ್ ಪಕ್ಷದ ವಿಪ್ ಉಲ್ಲಂಘಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದರು. ಶಾಸಕ ಶಿವರಾಂ ಹೆಬ್ಬಾರ್ ಮತದಾನ ದಿಂದ ದೂರ ಉಳಿದಿದ್ದರು. ಆದರೆ ಶಿವರಾಂ ಹೆಬ್ಬಾರ್ ಅನಾರೋಗ್ಯದ ಕಾರಣ ಮತದಾನಕ್ಕೆ ಗೈರು ಹಾಜರಾಗಿದ್ದೆ, ಯಾವುದೇ ದುರುದ್ದೇಶ ಇರಲಿಲ್ಲ ಎಂದು ತಿಳಿಸಿದ್ದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ!