ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದ ಬೆಲ್ಟ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ವೇಳೆ ಕಾರ್ಖಾನೆ ಭಾಗಶಃ ಸುಟ್ಟು ಕರಕಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ‘ಬಿಎಂಟಿಸಿ ಬಸ್ನಲ್ಲಿ’ ಶಂಕಿತ ಬಂದಿದ್ದು, ಪ್ರಯಾಣದ ಇತಿಹಾಸ ಪತ್ತೆ
ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಬೆಲ್ಟ್ ಕಾರ್ಖಾನೆ ಹೊತ್ತಿ ಉರಿದಿದೆ ಎಂದು ಹೇಳಲಾಗುತ್ತಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ಬಿದ್ದಿದ್ದು ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.
‘ಉದ್ಯೋಗ’ ಮಾಡಲು ಸಮರ್ಥವಿರುವ ಪತ್ನಿಗೆ ‘ಜೀವನಾಂಶ’ ನೀಡಲ್ಲ : ಪತಿಯ ವಾದವನ್ನು ತಳ್ಳಿಹಾಕಿದ ಹೈಕೋರ್ಟ್
ಬೆಲ್ಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಖಾನೆಗೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಿದೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.