ಚಿಕ್ಕಮಗಳೂರು: ಜೆಡಿಎಸ್, ಬಿಜೆಪಿ ನಾಯಕರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ. ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪಿಎಂ ಮೋದಿ ಹೇಳಿದ್ದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದರು. ಆದರೇ ಆಯ್ತಾ.? ಈ ಬಗ್ಗೆ ಚರ್ಚಿಸಲು ಬಹಿರಂಗವಾಗಿ ವೇದಿಕೆಗೆ ಬರಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸವಾಲ್ ಹಾಕಿದ್ದಾರೆ.
ನಗರದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.
4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ನಾಳೆ ಕಲಬುರಗಿ ಜಿಲ್ಲೆಯಲ್ಲಿ ವಿಪಕ್ಷನಾಯಕ ಅಶೋಕ್ ಪ್ರವಾಸ: ಹತ್ಯೆಗೊಳಗಾದ ಬಿಜೆಪಿ ಮುಖಂಡರ ಕುಟುಂಬ ಸದಸ್ಯರ ಭೇಟಿ
BREAKING: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್!