ಬೆಂಗಳೂರು: ಹೊಸಕೋಟೆ ಬಳಿಯ ಕರಿಬೀರನಹೊಸಹಳ್ಳಿ ಬಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ.
ಮೃತರನ್ನು ಮುನಿಯಪ್ಪ(70), ಮುನಿಯಮ್ಮ (60) ಹಾಗೂ ಭಾರತಿ (40) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್ ವಾಗ್ಧಾಳಿ
BREAKING: ರಾಜಕೀಯಕ್ಕೆ ಗುಡ್‌ಬೈ ಹೇಳಿದ ಮಾಜಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್!