ಚಿಕ್ಕಮಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ, ಅಗತ್ಯ ಬಿದ್ದರೆ ಎನ್ಐಎಗೆ ವಹಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಅಂಥ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದು ತಿಳಿಸಿದರು.ಇನ್ನೂ ನಾನು ಬಾಂಬ್ ಸ್ಫೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು ಎಂದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟವಾಗಿತ್ತು. ಆಗ ಬಿಜೆಪಿಯವರು ಅಧಿಕಾರದಲ್ಲಿದ್ದರು ಅಂತ ಅವರು ಹೇಳಿದರು.
‘ಮಿಷನ್ 370’: ಮುಂದಿನ 10 ದಿನಗಳಲ್ಲಿ 12 ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ