ರಾಮನಗರ: ಜಿಲ್ಲೆಯ ಹಾರೋಹಳ್ಳಿಯ ತಹಶೀಲ್ದಾರ್ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದಂತ ಘಟನೆ ನಡೆದಿದೆ. ಹೀಗೆ ಕೊಲೆಗೆ ಯತ್ನಿಸಿದಂತ ಲಾರಿ ಚಾಲಕನನ್ನು ತಹಶೀಲ್ದಾರ್ ಚೇಸ್ ಮಾಡಿ ಹಿಡಿದಿರೋದಾಗಿ ತಿಳಿದು ಬಂದಿದೆ.
ಫೆಬ್ರವರಿ.29ರಂದು ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿರೋ ಬಗ್ಗೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಹಶೀಲ್ದಾರ್ ವಿಜಯಣ್ಣ ಅವರಿಗೆ ದೂರು ಬಂಧಿತ್ತು. ಈ ಮಾಹಿತಿ ಆಧರಿಸಿ, ಸ್ಥಳಕ್ಕೆ ತೆರಳಿ ನೋಡಿದಾಗ ಲಾರಿಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಲಾಗುತ್ತಿತ್ತು.
ಇದರನ್ನು ಗಮನಿಸಿದಂತ ಹಾರೋಹಳ್ಳಿ ತಹಶೀಲ್ದಾರ್ ವಿಜಯಣ್ಣ ಲಾರಿ ಚಾಲಕನನ್ನು ನಿಲ್ಲಿಸು ಎಂಬುದಾಗಿ ಸೂಚಿಸಿದ್ದಾರೆ. ಇದನ್ನು ಕಂಡು ಸಿಟ್ಟಾದಂತ ಲಾರಿ ಚಾಲಕ ಅವರ ಮೇಲೆ ಲಾರಿ ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿನಿಮೀಯ ರೀತಿಯಲ್ಲಿ ಪಾರಾದಂತ ಅವರು, ಪರಾರಿಯಾಗಲು ಯತ್ನಿಸಿದಂತ ಲಾರಿ ಚಾಲಕನನ್ನು ಚೇಸ್ ಮಾಡಿ ಹಿಡಿದಿದ್ದಾರೆ.
ಈ ಸಂಬಂಧ ಹಾರೋಹಳ್ಳಿ ಠಾಣೆಗೆ ತಹಶೀಲ್ದಾರ್ ವಿಜಯಣ್ಣ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಫೆ.29ರಂದು ನಡೆದಿದ್ದಂತ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
WTC – ಮತ್ತೆ ನಂ.1 ಸ್ಥಾನಕ್ಕೆ ಜಿಗಿದ ಭಾರತ – ಹಿಟ್ಮ್ಯಾನ್ ರೋಹಿತ್ ನಾಯಕತ್ವಕ್ಕೆ ಮೆಚ್ಚುಗೆ!
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!