ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಈ ಕುರಿತಂತೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ನಾಳೆ, ಮಾರ್ಚ್ 4, 2024 ರಿಂದ ಎರಡು ದಿನಗಳ (ಸೋಮವಾರ ಮತ್ತು ಮಂಗಳವಾರ) ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದು, ಅಲ್ಲಿ ಅವರು ಅನೇಕ ಸಾರ್ವಜನಿಕ ಮತ್ತು ಸಾಂಸ್ಥಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದಿದೆ.
ಈ ವಾಸ್ತವ್ಯದ ವೇಳೆ ಅವರು ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ ನಡೆಸಲಿದ್ದು, ಬೆಳಗಾವಿಯಲ್ಲಿ ಸ್ವನಿಧಿ ಯೋಜನೆಯ ಫಲಾನುಭವಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದಿದೆ.
ನಡ್ಡಾ ಅವರು ಮಾರ್ಚ್ 04 ರ ಸೋಮವಾರ ರಾತ್ರಿ 08:30 ಕ್ಕೆ ಕರ್ನಾಟಕದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ಅವರಿಗೆ ವಿಮಾನ ನಿಲ್ದಾಣದ ಹೊರಗೆ ಪಕ್ಷದ ಹಿರಿಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಭವ್ಯ ಸ್ವಾಗತ ನೀಡಲಿದ್ದಾರೆ. ಬಳಿಕ ರಾತ್ರಿ 9 ಗಂಟೆಗೆ ಕಾಕತಿಯಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಲೋಕಸಭಾ ಕ್ಷೇತ್ರಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ ಎಂದು ಹೇಳಿದೆ.
ಮರುದಿನ ಮಾರ್ಚ್ 05 ರ ಮಂಗಳವಾರ ಬೆಳಿಗ್ಗೆ 11:15 ಕ್ಕೆ ಚಿಕ್ಕೋಡಿಯ ಕಿವಾಡ್ ಮೈದಾನದಲ್ಲಿ ಬೂತ್ ಕಾರ್ಯಕರ್ತರ ಸಮ್ಮೇಳನವನ್ನುದ್ದೇಶಿಸಿ ನಡ್ಡಾ ಮಾತನಾಡಲಿದ್ದಾರೆ. ಮಧ್ಯಾಹ್ನ 02:15 ಕ್ಕೆ ಬೆಳಗಾವಿಯ ಐಟಿಸಿ ವೆಲ್ಕಮ್ ಹೋಟೆಲ್ ನಲ್ಲಿ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಸಂಜೆ 5.15ಕ್ಕೆ ಬೆಳಗಾವಿಯ ಜಿರ್ಗೆ ಸಭಾಂಗಣದಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿಸಿದೆ.
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!