ಮಂಡ್ಯ : ನಾನು ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ. ನನ್ನನ್ನು ಬರಲು ಹೇಳಿದರೆ ಮಾತ್ರ ಹೋಗುತ್ತೇನೆ. ಕರ್ನಾಟಕದ ಅಭ್ಯರ್ಥಿ ಪಟ್ಟಿ ಯಾವಾಗ ಬರುವುದೋ ಆಗಲೇ ನಮ್ಮದೂ ಬರಲಿದೆ.ಹಾಗಾಗಿ ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ವಿಶ್ವಾಸದಿಂದ ನುಡಿದರು.
ತಾಲೂಕಿನ ಚುಂಚನಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ತಯಾರಿ ಬಗ್ಗೆ ಯಾವುದೇ ನಿರ್ದಿಷ್ಟ ಯೋಜನೆ ರೂಪಿಸಿಕೊಂಡಿಲ್ಲ. ಈ ಬಾರಿ ಒಂದು ರಾಜಕೀಯ ಪಕ್ಷದ ಚಿಹ್ನೆಯಡಿ ನಾನು ಸ್ಪರ್ಧಿಸುತ್ತಿದ್ದೇನೆ. ಈ ವಿಚಾರದಲ್ಲಿ ಪಕ್ಷ, ಪಕ್ಷದ ನಾಯಕರು ಏನು ಹೇಳುತ್ತಾರೆ ನೋಡಬೇಕು. ಈ ಬಾರಿ ಬೇರೆ ರೀತಿಯಲ್ಲಿ ಚುನಾವಣೆ ನಡೆಯುತ್ತದೆ. ಪ್ರಚಾರ, ಹೋರಾಟ, ಕ್ಯಾಂಪೇನ್ ಎಲ್ಲವೂ ವಿಭಿನ್ನವಾಗಿರಲಿದೆ ಎಂದರು.
ತುಮಕೂರು : ತೆಂಗಿನ ಸಸಿಗೆ ತಗುಲಿದ್ದ ‘ಬೆಂಕಿ’ ನಂದಿಸಲು ಹೋಗಿ ರೈತ ದಾರುಣ ಸಾವು
ನಟ ಯಶ್ ಈ ಬಾರಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸೋಲ್ಲ ಎಂಬ ವಿಚಾರದ ಬಗ್ಗೆ ಕೇಳಿದಾಗ, ರಾಜಕಾರಣ ಗಲೀಜು ಎಂದು ಹೇಳಿದ್ದಾರೆ. ಟೀಕೆ ಬಗ್ಗೆ ತಿಳಿದುಕೊಂಡಿದ್ದಾರೆ. ಅವರು ಈಗ ಸ್ಟಾರ್ ಇಂಡಿಯಾ. ಪ್ರಚಾರಕ್ಕೆ ಬರಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅವರಾಗಿಯೇ ಬರುವುದಾದರೆ ಸಂತೋಷ ಪಡುತ್ತೇನೆ. ದರ್ಶನ್ ಮತ್ತು ಯಶ್ ನನ್ನ ಮನೆಯ ಮಕ್ಕಳಿದ್ದಂತೆ. ಅವತ್ತಿನ ಸ್ಥಿತಿಯಲ್ಲಿ ನನ್ನ ಜೊತೆ ನಿಂತಿದ್ದರು. ಅವರು ಪ್ರಚಾರಕ್ಕೆ ಬರಲಿಲ್ಲವೆಂದರೂ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ ಎಂದರು.
SHOCKING : ಬೆಂಗಳೂರಲ್ಲಿ 3 ವರ್ಷದ ಮಗುವಿಗೆ ಚಿತ್ರಹಿಂಸೆ : ಗೆಳೆಯನ ಜೊತೆ ಸೇರಿ ತಾಯಿಯಿಂದ ಹೀನ ಕೃತ್ಯ
ಕಳೆದ ಚುನಾವಣೆಯಲ್ಲಿ ನನ್ನ ಪರವಾಗಿ ನಟೇಶ ಹಾಗೂ ದರ್ಶನ್ ನಿಸ್ವಾರ್ಥವಾಗಿ ಪ್ರಚಾರ ಮಾಡಿದರು ಇದೀಗ ಮತ್ತೆ ಪದೇ ಪದೇ ಅವರನ್ನು ಕರೆಯುವುದು ಸರಿಯಲ್ಲ. ಇದೀಗ ಅವರಿಬ್ಬರೂ ಒಂದೊಂದು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.ಹಾಗಾಗಿ ಅವರನ್ನು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ. ಅವರಾಗಿಯೇ ಬಂದರೆ ಅವರನ್ನು ಮನತುಂಬಾ ಸ್ವಾಗತಿಸುತ್ತೇನೆ. ಅವರಿಬ್ಬರೂ ನಿಂತರೆ ದೊಡ್ಡ ಬೆಂಬಲ ನನ್ನ ಹಿಂದೆ ಇದೆ ಎಂದು ಭಾಸವಾಗುತ್ತದೆ ಎಂದು ತಿಳಿಸಿದರು.