ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲಾಗಿದೆ ಎಂದು ಆಕ್ರೋಶ ಹೊರಹಾಕಿದೆ.
BREAKING:ಸಾರ್ವಕಾಲಿಕ ಗರಿಷ್ಠ ಮಟ್ಟ 64,000 ಡಾಲರ್ ತಲುಪಿದ ‘ಬಿಟ್ ಕಾಯಿನ್’
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.
‘ಕೆಫೆಯಲ್ಲಿ’ ಬಾಂಬ್ ಬ್ಲಾಸ್ಟ್ ಪ್ರಕರಣ : ‘ಕುಕ್ಕರ್ ಬಾಂಬ್’ ಆರೋಪಿ ‘ಶಾರಿಕ್’ ನನ್ನು ಬೆಂಡೆತ್ತುತ್ತೀರುವ ಪೊಲೀಸರು
ರಾಷ್ಟ್ರ ವಿರೋಧಿ ಧೋರಣೆಯ ರಾಜ್ಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ವಾಗ್ದಾಳಿ ನಡೆಸಿದೆ.
ಇಷ್ಟಾರ್ಥ ಸಾಧನೆಗೆ ಮಹಾಶಿವರಾತ್ರಿಯಂದು ‘ಬಿಲ್ವಪತ್ರೆ’ ಅರ್ಪಿಸುವಾಗ ಈ ನಿಯಮ ಪಾಲಿಸಲೇಬೇಕು
ಕಳೆದ ಫೆಬ್ರವರಿ 27ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರು ಜಯಗಳಿಸಿದ್ದರು ಈ ವೇಳೆ ಅವರ ಬೆಂಬಲಿಗ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.ಈ ಕುರಿತಂತೆ ತೀವ್ರ ವಿರೋಧವಾದ ವ್ಯಕ್ತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಫ್ ಎಸ್ ಎಲ್ ತನಿಖೆಗೆ ನೀಡಿದಾಗ ಅದರಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ದೃಢವಾಗಿದೆ. ಆದರೆ ರಾಜ್ಯ ಸರ್ಕಾರ ಇದುವರೆಗೂ ಈ ಕುರಿತಂತೆ ಅಧಿಕೃತವಾಗಿ ಏನು ತಿಳಿಸಿಲ್ಲ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
— BJP Karnataka (@BJP4Karnataka) March 4, 2024