ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಎಫ್ಎಸ್ಎಲ್, ಗೃಹ ಇಲಾಖೆಯ ಫಾರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡವಾಗಿದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.ಖಾಸಗಿ ಸಂಸ್ಥೆಯವರು ನೀಡಿರುವ ಎಫ್ಎಸ್ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ ಸಚಿವೆ ಜಿ. ಪರಮೇಶ್ವರ್ ಹೇಳಿದರು.
ಮೋದಿ ಸರ್ಕಾರ ರೈತರನ್ನು ‘ಶತ್ರುಗಳಂತೆ’ ನಡೆಸಿಕೊಳ್ಳುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದು ನಮ್ಮ ಇಲಾಖೆಗೆ ಸಂಬಂಧಿಸಿದ್ದು. ನಮ್ಮ ವರದಿ ಬಂದ ಮೇಲೆ ಹೇಳುತ್ತೇನೆ. ಖಾಸಗಿಯವರಿಗೆ ಈ ರೀತಿ ವರದಿ ಕೊಡಲು ಅನುಮತಿ ಇದೆಯಾ? ಅವರಿಗೆ ಎನ್ಒಸಿ ಯಾರು ಕೊಟ್ಟಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇನೆ ಎಂದರು.
ತುಮಕೂರು : ‘ನಕಲಿ ವೈದ್ಯನ’ ಚುಚ್ಚುಮದ್ದಿಗೆ ಹಾರಿಹೋಯ್ತು ವೃದ್ದನ ಪ್ರಾಣ!
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದ ಅವರು, ಸಭೆ ಮಾಡಿ ಈಗಾಗಲೇ ಎಲ್ಲವನ್ನೂ ಹೇಳಿದ್ದೇನೆ. ಕೆಲ ವಿಚಾರ ಹಂಚಿಕೊಳ್ಳಲು ಆಗಲ್ಲ. ಎನ್ಐಎ ಈಗಾಗಲೆ ತನಿಖೆ ಆರಂಭಿಸಿದ್ದಾರೆ, ಎನ್ಎಸ್ಜಿ ಕೂಡ ತನಿಖೆ ನಡೆಸುತ್ತಿದೆ. ಇದರ ಹಿಂದೆ ಯಾರಿದ್ದಾರೆ, ವ್ಯಕ್ತಿ ಇದ್ದಾರಾ, ಸಂಘಟನೆ ಇದೆಯಾ.? ಎಲ್ಲವನ್ನೂ ಪರಿಶೀಲನೆ ಮಾಡಬೇಕು ಎಂದು ಹೇಳಿದರು.