ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ನಾಳೆ ರೈತ ಸಂಘಟನೆಗಳು ಹಾಗೂ ಬಿಜೆಪಿಯಿಂದ ಪ್ರತಿಭಟನೆ ಕರೆ ನೀಡಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಅವರು, ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ತಜ್ಞರು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ನಾಳೆ ಪ್ರತಿಭಟನೆ ನಡೆಸೋದಾಗಿ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ರೈತ ಸಂಘಟನೆ ಹಾಗೂ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕೆ ಆರ್ ಎಸ್ ಡ್ಯಾಂ ಬಳಿ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಗೋ ಬ್ಯಾಕ್ ಚಳುವಳಿ ಮೂಲಕ ಟ್ರಯಲ್ ಬ್ಲಾಸ್ಟ್ ಗೆ ವಿರೋಧವನ್ನು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿ ವ್ಯಕ್ತಪಡಿಸಲಿದ್ದಾರೆ ಎಂದಿದ್ದಾರೆ.
ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಹಾಗೂ ರೈತ ಸಂಘಟನೆಗಳಿಂದ ನಾಳೆ ಕೆ ಆರ್ ಎಸ್ ಡ್ಯಾಂ ಬಳಿಯಲ್ಲಿ ಗೋ ಬ್ಯಾಕ್ ಚಳುವಳಿಯನ್ನು ನಡೆಸೋದಾಗಿ ಹೇಳಿದ್ದಾರೆ.
ವರದಿ: ಗಿರೀಶ್ ರಾಜ್, ಮಂಡ್ಯ
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಮತ್ತೋರ್ವ ಗಾಯಾಳು ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಬಿಜೆಪಿ ‘Modi ka Parivar’ ಅಭಿಯಾನ ಆರಂಭ : “ಮೋದಿಗೆ ಕುಟುಂಬವಿಲ್ಲ” ಲಾಲು ಹೇಳಿಕೆಗೆ ತಿರುಗೇಟು