ಬೆಂಗಳೂರು: ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಮತ್ತೋರ್ವ ಗಾಯಾಳು ಗುಣಮುಖರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು. ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ದೀಪಾಂಶು ಎಂಬುವರು ಈಗಾಗಲೇ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.
ಈ ಘಟನೆಯಲ್ಲೇ ನವ್ಯಾ ಎಂಬುವರು ಗಾಯಗೊಂಡಿದ್ದರು. ಅವರ ಕಿವಿಯ ಭಾಗಕ್ಕೆ ಗಾಯವಾಗಿತ್ತು. ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಂತ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಗುಣಮುಖರಾದ ಕಾರಣ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದಂತ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಈ ಬಳಿಕ ಕೆಫೆಯ ಮಾಲೀಕರು ತಾವೇ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸೋದಾಗಿ ತಿಳಿಸಿದ್ದರು.
ಬಿಜೆಪಿ ‘Modi ka Parivar’ ಅಭಿಯಾನ ಆರಂಭ : “ಮೋದಿಗೆ ಕುಟುಂಬವಿಲ್ಲ” ಲಾಲು ಹೇಳಿಕೆಗೆ ತಿರುಗೇಟು
Good News: ‘ಸಕಾಲ’ದಡಿ ಅರ್ಜಿ ಸ್ವೀಕೃತಿಯಿಂದ ‘ಸೇವೆ’ಯವರೆಗೆ ಎಲ್ಲವೂ ‘ಡಿಜಿಟಲೀಕರಣ’ಗೊಳಿಸಿ- ಸಚಿವ ಕೃಷ್ಣ ಬೈರೇಗೌಡ