ಬಳ್ಳಾರಿ: 2023-24ನೇ ಸಾಲಿನ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‍ಚೇರ್‍ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್‍ಚೇರ್‍ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್, 07 ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ಅವರು ತಿಳಿಸಿದ್ದಾರೆ.