ಮಡಿಕೇರಿ: ಬೆಂಗಳೂರು ಕೌಶಲ್ಯಾಭಿವೃದ್ದಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ) ಸಂಜೀವಿನಿ ಯೋಜನೆ, ಕೊಡಗು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್, 05 ರಿಂದ ಮಾರ್ಚ್, 07 ರವರೆಗೆ ನಗರದ ಬಾಲಭವನದ ಆವರಣದಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ಇರುವ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಡಗು ಜಿಲ್ಲಾ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.