ನವದೆಹಲಿ: ರಾಜ್ಯಸಭಾ ಸದಸ್ಯತ್ವಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ಮತ್ತು ಮಂಗಳವಾರ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸಲಿದ್ದಾರೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಳಗಾವಿಗೆ ಆಗಮಿಸಲಿರುವ ಅವರು, ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಪಕ್ಷದ ಕೋರ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಚುನಾವಣಾ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.
ನಡ್ಡಾ ಅವರು ತಮ್ಮ ಭೇಟಿಯ ಸಮಯದಲ್ಲಿ ಚುನಾಯಿತ ಪ್ರತಿನಿಧಿಗಳು, ಹಿರಿಯ ನಾಯಕರು ಮತ್ತು ಟಿಕೆಟ್ ಆಕಾಂಕ್ಷಿಗಳನ್ನು ಭೇಟಿ ಮಾಡಲಿದ್ದಾರೆ. ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ವಿವಿಧ ಲೋಕಸಭಾ ಕ್ಷೇತ್ರಗಳ ಚುನಾವಣಾ ಸಿದ್ಧತೆಗಳನ್ನು ನಡ್ಡಾ ಪರಿಶೀಲಿಸಲಿದ್ದಾರೆ ಎಂದು ಪಕ್ಷದ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ತಿಳಿಸಿದ್ದಾರೆ.
ನಡ್ಡಾ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿಯ ಕಿವಾಡದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೆಎಲ್ ಇ ಸಂಸ್ಥೆಯ ಜವಾಹರಲಾಲ್ ನೆಹರೂ ಜೀರ್ಗೆ ಹಾಲ್ ನಲ್ಲಿ ನಡೆಯುವ ಪ್ರಬುದ್ಧ ನಾಗರಿಕರ ಸಭೆಯಲ್ಲಿ ಭಾಗವಹಿಸುವರು