ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.
ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ.
ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಸನಾತನ ಧರ್ಮ’ ವಿವಾದ : ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರಧಾನಿ ಮೋದಿ ‘ವಂಶಪಾರಂಪರ್ಯ ಗುರುತು’ ವಾಗ್ದಾಳಿ
BREAKING : ರಾಜ್ಯಸಭಾ ಸದಸ್ಯತ್ವಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ‘ಜೆ.ಪಿ ನಡ್ಡಾ’ ರಾಜೀನಾಮೆ