ಬೆಂಗಳೂರು : ಎಸ್ಟಿ/ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತ:ಮಾಜಿ ಪ್ರಧಾನಿ ದೇವೇಗೌಡ
ಈ ಹಿನ್ನೆಲೆಯಲ್ಲಿ ಎಸ್ಟಿ/ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ ದೂರು ನೀಡಿದ್ದಾರೆ. ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ‘ಮಂಗನಕಾಯಿಲೆ’ : ಉತ್ತರಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 3 ಜನ ವೃದ್ಧರು ಬಲಿ
ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು ಗುತ್ತಿಗೆ ವಹಿಸುವುದು ಕಡ್ಡಾಯವಾಗಿದೆ. ಅಂತೆಯೇ ಎಸ್ಸಿ/ಎಸ್ಟಿ ಗುತ್ತಿಗೆದಾರರಿಗೆ 50 ಲಕ್ಷ ರು.ಗೆ ಬದಲಿಗೆ ಒಂದು ಕೋಟಿ ರು. ಮೀರದಂತೆ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡಬೇಕು ಎಂದು ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಈ ನಿಯಮವನ್ನು ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು ಗುತ್ತಿಗೆ ವಹಿಸುವಾಗ ಪಾಲನೆ ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಆದರೆ, ಅಧಿಕಾರಿಗಳು ಇದನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ರಾಜ್ಯದ ‘SSLC ಪರೀಕ್ಷೆ-1’ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಅಂತಿಮ ‘ಪ್ರವೇಶ ಪತ್ರ’ ವಿತರಣೆ