ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ನೇತೃತ್ವದ ಆರು ಪಕ್ಷಗಳ ಮೈತ್ರಿಕೂಟದ ಅಭ್ಯರ್ಥಿ ಶೆಹಬಾಜ್ ಅವರು ಪಾಕಿಸ್ತಾನದ 24 ನೇ ಪ್ರಧಾನಿಯಾಗಿ ಅಧ್ಯಕ್ಷ ಆರಿಫ್ ಅಲ್ವಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಪಾಕಿಸ್ತಾನದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ @CMShehbaz ಅವರಿಗೆ ಅಭಿನಂದನೆಗಳು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ
Congratulations to @CMShehbaz on being sworn in as the Prime Minister of Pakistan.
— Narendra Modi (@narendramodi) March 5, 2024