ನವದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆ 2024 ರ ದಿನಾಂಕಗಳನ್ನು ಮಾರ್ಚ್ 14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ. 2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ ಹಂತದ ಮತದಾನವು ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎನ್ನಲಾಗಿದೆ. ಮಾರ್ಚ್ 14 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.
‘140 ಕೋಟಿ ಭಾರತೀಯರು ತಮ್ಮ ಕುಟುಂಬ’ : ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು!
ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎಂದು ಮೂಲಗಳು ತಿಳಿಸಿವೆ. 2019ರಂತೆಯೇ ಈ ಬಾರಿಯೂ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ. ಮಾರ್ಚ್ 13, 2024 ರ ನಂತರ ಚುನಾವಣಾ ಆಯೋಗವು ದಿನಾಂಕಗಳನ್ನು ಪ್ರಕಟಿಸಲಿದೆ. ಮಾರ್ಚ್ 13 ರೊಳಗೆ, ಭಾರತದ ಚುನಾವಣಾ ಆಯೋಗವು ರಾಜ್ಯಗಳಲ್ಲಿ ತನ್ನ ಮೌಲ್ಯಮಾಪನವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸುಮಾರು 97 ಕೋಟಿ ಭಾರತೀಯರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. 2024 ರ ಲೋಕಸಭಾ ಚುನಾವಣೆಯ ಜೊತೆಗೆ, ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಆಯಾ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಲಿವೆ. ಇದರ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟಿಸಲಿದೆ.
ಉದ್ಯೋಗವಾರ್ತೆ : ‘SSC’ ಯಿಂದ ‘2049’ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ!