ಶಿರಸಿ: ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಘೋಷಣೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ. ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಅಂತ ಸಿಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶಿರಸಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಅವರು ಮುಖ್ಯಮಂತ್ರಿಗಳನ್ನು ಅಗೌರವದಿಂದ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಹಾಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿರುವವರು ಈ ರೀತಿ ಮಾತನಾಡುವುದಿಲ್ಲ. ಜನವಿರೋಧಿಯಾಗಿರುವವರು ಮಾತ್ರ ಈ ರೀತಿ ಮಾತನಾಡುತ್ತಾರೆ. ಅವರಿಗೆ ಸಂಸ್ಕೃತಿ ಇಲ್ಲ. ಅವರು ಮನುವಾದಿ ಹಾಗೂ ಹಿಂದುತ್ವವಾದಿ. ಕೇವಲ ಕಳೆದ 2-3 ತಿಂಗಳಿನಿಂದ ಚುರುಕಾಗಿದ್ದು, ಅವರು ಇಷ್ಟು ದಿನ ಎಲ್ಲಿದ್ದರು ಎಂದು ಪ್ರಶ್ನಿಸಿದರು. ಜಿಲ್ಲೆಗೆ ಮಲ್ಪಿಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆಯಿದ್ದು, ಈ ಬಗ್ಗೆ ಆಯವ್ಯಯದಲ್ಲಿ ಪ್ರಸ್ತಾಪವಿಲ್ಲದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.