ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾತ್ರಿ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಪಾದಯಾತ್ರಿಗಳಿಗೆ ಚಾರ್ಮಾಡಿಯಿಂದ ಸರ್ವಸಿದ್ಧತೆ ಮಾಡಲಾಗಿದೆ. ನೂರಾರು ತಂಡಗಳ ಸಹಸ್ರಾರು ಸದಸ್ಯರು ಪಾದಯಾತ್ರೆಯಲ್ಲಿ ಚಾರ್ಮಾಡಿ ಮೂಲಕ ಧರ್ಮಸ್ಥಳಕ್ಕೆ ಬರುತ್ತಾರೆ. ಅವರಿಗೆ ಅನುಕೂಲ ಕಲ್ಪಿಸಲು ಸ್ಥಳೀಯ ಸಂಘ-ಸಂಸ್ಥೆಗಳು, ಸಾರ್ವಜನಿಕರು, ಪಾನೀಯ, ನೀರು ಇತ್ಯಾದಿ ವ್ಯವಸ್ಥೆಗಳನ್ನು ಉಚಿತವಾಗಿ ನೀಡಲು ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಈ ನಡುವೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳನ್ನು ಬಿಡುಗಡೆ ಮಾಡಲಾಗಿದೆ.
* ಪಾದಯಾತ್ರಿಗಳು ಮಾರ್ಗದ ಮಧ್ಯೆ ನಡೆಯಬೇಡಿ.
• ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಇರುವುದರಿಂದ ಕಡ್ಡಾಯವಾಗಿ ಉಡುವ ಬಟ್ಟೆಯ ಬೆನ್ನಿನಲ್ಲಿ / ತೋಳಿನಲ್ಲಿ | ತಲೆಯ ದಿರಿಸಿನಲ್ಲಿ ಪ್ರತಿಫಲಕ (Reflector) ಇರಲೇಬೇಕು.
• ಪಾದಯಾತ್ರೆಯಲ್ಲಿ ಬರುವಾಗ ಶಿವ ಪಂಚಾಕ್ಷರಿ ಮಂತ್ರ ವಶಿಸುತ್ತಾ ಬನ್ನಿ.
* ನೀವು ವಾಸ್ತವ್ಯ ಇರುವ ಸ್ಥಳದಲ್ಲಿ ಮತ್ತು ದಾರಿಯಲ್ಲಿ ಬರುವಾಗ ಉಗುಳುವುದು, ಗಲೀಜು ಇತ್ಯಾದಿ ಮಾಡುವುದರಿಂದ ಇತರ ಸದ್ಭಕ್ತರನ್ನು ಹೀಯಾಳಿಸಿದಂತಾಗುತ್ತದೆ.
• ತಂಗುವ ಸ್ಥಳ/ಅಡುಗೆ ಮಾಡಿದ ಸ್ಥಳವನ್ನು ಸ್ವಯಂಸ್ಪೂರ್ತಿಯಿಂದ ಸ್ವಚ್ಛ
ಮಾಡಿರಿ.
* ಪ್ಲಾಸ್ಟಿಕ್ ಬಾಟ್ಲಿ, ಕಸ-ಕಡ್ಡಿಗಳನ್ನು ರಸ್ತೆ ಬದಿಯಲ್ಲಿ ಬಿಸಾಡಬಾರದು. ಸ್ವಚ್ಛತೆ ಕಾಪಾಡಿ