ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಮಿತ ವೇತನವನ್ನು ರೂ.13,000ರಿಂದ ರೂ.15,000ಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ನಡವಳಿಯನ್ನು ಹೊರಡಿಸಿದ್ದು, ಕಂದಾಯ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ಮಾಸಿಕ ಮಿತಿ ವೇತನವನ್ನು ದಿನಾಂಕ 01-04-2024ರಿಂದ ಅನ್ವಯವಾಗುವಂತೆ ಮಾಸಿಕ ರೂ.13,000ಗಳಿಂದ ರೂ.15,000ಗಳಿಗೆ ಹೆಚ್ಚಿಸಿ ಆದೇಶಿಸಿದೆ.
ಇನ್ನೂ ಇದಕ್ಕೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2029-101-1-01-Revenue Divisions-034-Contract/Outsource ರ ಅಡಿಯಲ್ಲಿ ಭರಿಸುವಂತೆ ಸೂಚಿಸಿದೆ. ಅಲ್ಲದೇ ಈ ಆದೇಶವನ್ನು ಆರ್ಥಿಕ ಇಲಾಖೆಯು ದಿನಾಂಕ 27-02-2024ರಲ್ಲಿ ನೀಡಿರುವ ಸಹಮತಿಯ ಮೇರೆಗೆ ಹೊರಡಿಸಲಾಗಿದೆ ಎಂದಿದ್ದಾರೆ.
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು