ನವದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆ ಸಂಬಂಧ ಇಂದು ಬಿಜೆಪಿ ನಾಯಕರ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ನಾಯಕರ ಜೊತೆಗೆ ಇಂದು ರಾಷ್ಟೀಯ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ವಿಡಿಯೋದಲ್ಲಿ ಕಂತೆ ಕಂತೆ ಹಣ ತೋರಿಸಿ ಆಮಿಷ : ಆರೋಪಿ ಕೈಗೆ ಕೋಳ ತೊಡಿಸಿದ ಖಾಕಿ
ಈ ಒಂದು ಸಭೆಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ,ಆರ್ ಅಶೋಕ್, ಪ್ರಹಲ್ಲಾದ್ ಜೋಶಿ ಹಾಗೂ ಬಿಎಲ್ ಸಂತೋಷ್ ಸೇರಿದಂತೆ ಇನ್ನೂ ಅನೇಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ!
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡುವ ಬಗ್ಗೆ ಸಭೆಯಲ್ಲಿ ಸಮಲೋಚನೆ ನಡೆಸಲಾಗುತ್ತದೆ. ರಾಜ್ಯ ಬಿಜೆಪಿ ಘಟಕ ಕಳಿಸಿರುವ ಪಟ್ಟಿ ಸಂಬಂಧ ವರಿಷ್ಠರ ಜೊತೆಗೆ ಚರ್ಚಿಸಲಾಗುತ್ತದೆ.ನಂತರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಚರ್ಚಿಸಲಾಗುತ್ತದೆ ಎಂದು ತಿಳಿದುಬಂದಿದೆ.