ಬೆಂಗಳೂರು : ಕಳೆದ ವರ್ಷ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇನ್ನು ಹಸಿಯಾಗಿರುವಾಗಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿ 73 ಪ್ರಕರಣಗಳು ಬೆಳಕಿಗೆ ಬಂದಿವೆ.
ನೆಲಮಂಗಲದಲ್ಲಿ ಅವ್ಯಾಹತವಾಗಿ ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿವೆ. ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ಬ್ರೂಣ ಹತ್ಯೆ ಕರ್ಮಕಾಂಡ ಇದೀಗ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಆಸ್ಪತ್ರೆಯಲ್ಲಿ ಇದುವರೆಗೂ 73 ಪ್ರಕರಣಗಳು ನಡೆದಿವೆ ಎಂದು ಹೇಳಲಾಗತ್ತಿದೆ.
ಈ ಆಸ್ಪತ್ರೆ ಡಾ. ರವಿಕುಮಾರ್ ಎಂಬವರಿಗೆ ಸೇರಿದೆ ಎಂದು ಹೇಳಲಾಗುತ್ತಿದೆ. ಭ್ರೂಣ ಲಿಂಗ ಪತ್ತೆ ಭ್ರೂಣ ಹತ್ಯೆ ನಿಷೇಧವಿದ್ದರೂ ಯಾವುದೇ ರೀತಿಯಾದಂತಹ ಭಯವಿಲ್ಲದೆ ಹತ್ಯೆ ನಡೆಯುತ್ತಿದೆ. ಇದೀಗ ಆಸ್ಪತ್ರೆಯ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್ ಆಸರೆ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲ ಟೌನ್ ಠಾಣೆಯಲ್ಲಿ ಡಾಕ್ಟರ್ ರವಿಕುಮಾರ್ ವಿರುದ್ಧ ಮೊಕದ್ದಮೆ ದಾಖಲಾಗಿದೆ ಐಪಿಸಿ ಸೆಕ್ಷನ್ 312 315 316 ಅಡಿ ಕೆ ಎಸ್ ದಾಖಲಾಗಿದೆ. ಘಟನೆ ಕುರಿತಂತೆ ಬೆಂಗಳೂರು ಗ್ರಾಮಾಂತರ ಡಿ ಎಚ್ ಓ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದು, ಈ ಪ್ರಕರಣ ಕುರಿತಂತೆ ತನಿಖೆ ನಡೆಸಿ ಮುಲಾಜಿ ಲ್ಲದೆ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.