ಪ್ರಸ್ತುತ ಜಗತ್ತಿನಲ್ಲಿ ಹೆಣ್ಣಿನ ಮೇಲೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಲೆ ಇದೆ.ಇದರಲ್ಲಿ ಅತ್ಯಂತ ಭೀಕರ ಹಾಗೂ ಪ್ರಮುಖವಾದದ್ದು ಹೆಣ್ಣು ಭ್ರೂಣಹತ್ಯೆಯಾಗಿದೆ ಕೂಡ.ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ನಮಗೆಲ್ಲ ತಿಳಿದಿದೆ. ಇದರ ಬೆನ್ನಲೇ ಈಗ ಮತ್ತೊಂದು ಆಸ್ಪತ್ತೆಯಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರಿನ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಬರೋಬ್ಬರಿ 73 ಭ್ರೂಣ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಆಸ್ಪತ್ರೆ ವೈದ್ಯ ಡಾ.ರವಿಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.