ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅನುದಾನ ಮಂಜೂರು ಮಾಡಿ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 136 ಧಾರ್ಮಿಕ ಸಂಸ್ಥೆಗಳಿಗೆ ಒಟ್ಟು ರೂ.713.50 ಲಕ್ಷಗಳ ಅನುದಾವನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ.
ಧಾರ್ಮಿಕ ಸಂಸ್ಥೆಗಳಇಗೆ ಮಂಜೂರು ಮಾಡಲಾಗ ಅನುದಾನವನ್ನು ಖಜಾನೆ-2 ಮುಖಾಂತರ ಜಿಲ್ಲಾಧಿಕಾರಿಗಳ ಡಿಡಿಓ ಸಂಕೇತಕ್ಕೆ ಅಪ್ ಲೋಡ್ ಮಾಡುವಂತೆ ಷರತ್ತು ವಿಧಿಸಲಾಗಿದೆ.
ಅಲ್ಲದೇ ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು ಇವರು ಖಜಾನೆ-2ರಡಿ ನಿಯಮಾನುಸಾರ ಅನುದಾವನ್ನು ಡ್ರಾ ಮಾಡಲು ಕ್ರಮವಹಿಸುವುದು. ಅನುದಾನ ಬಿಡುಗಡೆ ಮಾಡಿರುವ ಸಂಸ್ಥೆಯು ನಿಯಮಾನುಸಾರ ನೀಡಬಹುದಾದ ಮೊತ್ತವನ್ನು ಮುಂಗಡ ರಸೀದಿ ಪಡೆದು ಖಜಾನೆ-2ರಡಿ ಬಿಲ್ಲು ತಯಾರಿಸಿ ಪಾವತಿಸುವಂತೆ ತಿಳಿಸಲಾಗಿದೆ.
ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆಯಬೇಕು ಎಂದು ತಿಳಿಸಿದೆ.
ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ