ಬೆಂಗಳೂರು: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳಿಂದ ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಬಾಂಬರ್ ಪೋಟೋವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕೇವಲ ಐದು ಸೆಕೆಂಡುಗಳಲ್ಲಿ 2 ಬಾರಿ ಬಾಂಬ್ ಸ್ಪೋಟಗೊಳಿಸಲಾಗಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು.
ರಾಜ್ಯ ಸರ್ಕಾರದಿಂದ ಆರಂಭದಲ್ಲಿ ಈ ಪ್ರಕರಣವನ್ನು ಸಿಸಿಬಿಗೆ ವಹಿಸಿತ್ತು. ಆ ಬಳಿಕ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಎನ್ಐಎ ತನಿಖೆಗೆ ವಹಿಸಲಾಗಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ್ದಂತ ಎನ್ಐಎ ಅಧಿಕಾರಿಗಳು ಇಂದು ಬಾಂಬರ್ ಪೋಟೋವನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಆತನ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ: ಪೊಲೀಸ್ ಇಲಾಖೆ ವರದಿಯೇ ಅಧಿಕೃತ – ಸಿಎಂ
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ