ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂ ಯಶವಂತಪುರ-ವಿಜಯಪುರ ರೈಲುಗಳ ಸಂಚಾರ ಅವಧಿ ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ಕೆಳಗಿನ ರೈಲುಗಳ ಸಂಚಾರದ ಅವಧಿ ಮತ್ತೆ ಮೂರು ತಿಂಗಳವರೆಗೆ ವಿಸ್ತರಿಸಲು ನೈರುತ್ಯ ರೈಲ್ವೆಯು ನಿರ್ಧರಿಸಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
ಯಶವಂತಪುರ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈ.ಸಂ.06545) ರೈಲನ್ನು ಜೂನ್ 30, 2024 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಮಾರ್ಚ್ 3, 2024 ರವೆರೆಗೆ ಓಡಿಸಲು ಸೂಚನೆ ನೀಡಲಾಗಿತ್ತು.
ವಿಜಯಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈ.ಸಂ.06546) ರೈಲನ್ನು ಜುಲೈ 1, 2024 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಏಪ್ರಿಲ್ 1, 2024 ರವೆರೆಗೆ ಓಡಿಸಲು ಸೂಚನೆ ನೀಡಲಾಗಿತ್ತು.
ಈ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ವೇಳಾಪಟ್ಟಿ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಆಗಿರುವುದಿಲ್ಲ.
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ
ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್