ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಮನಮಧುರೈ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ.
ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು, ಪ್ರಯಾಣಿಕರ ಬೇಡಿಕೆಯ ಮೇರೆಗೆ ಮೈಸೂರು ಮತ್ತು ತಮಿಳುನಾಡಿನ ಮನಮಧುರೈ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ ಎಂದಿದೆ.
ಈ ವಿಶೇಷ ರೈಲು (06237) ಮಾರ್ಚ್ 11, 2024 ರಂದು ಮೈಸೂರು ನಿಲ್ದಾಣದಿಂದ ಸಂಜೆ 06:35 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 09:10 ಗಂಟೆಗೆ ತಮಿಳುನಾಡಿನ ಮನಮದುರೈ ನಿಲ್ದಾಣವನ್ನು ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಇದೇ ರೈಲು (06238) ಮಾರ್ಚ್ 12, 2024 ರಂದು ಮಧ್ಯಾಹ್ನ 12 ಗಂಟೆಗೆ ಮನಮಧುರೈ ನಿಲ್ದಾಣದಿಂದ ಹೊರಟು ಮರುದಿನ ಬುಧವಾರ ರಾತ್ರಿ 01:55 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಮದ್ದೂರು, ರಾಮನಗರಂ, ಕೆಂಗೇರಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಬೆಂಗಳೂರು, ಬಂಗಾರಪೇಟೆ, ತಿರುಪತ್ತೂರು, ಸೇಲಂ, ನಾಮಕ್ಕಲ್, ಕರೂರ್, ತಿರುಚ್ಚಿರಾಪಳ್ಳಿ, ದಿಂಡಿಗಲ್ & ಮಧುರೈ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.
ಈ ವಿಶೇಷ ರೈಲಿನಲ್ಲಿ ಎರಡನೇಯ ಹವಾನಿಯಂತ್ರಿತ ದರ್ಜೆ-2, ಮೂರನೇಯ ಹವಾನಿಯಂತ್ರಿತ ದರ್ಜೆ-6, ಸ್ಲೀಪರ್ ಕ್ಲಾಸ್ ಬೋಗಿಗಳು-9, ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು-2 ಮತ್ತು ಬ್ರೇಕ್ ವ್ಯಾನ್ ಕಮ್ ಜನರೇಟರ್ ಕಾರು-2 ಸೇರಿದಂತೆ ಒಟ್ಟು 21 ಬೋಗಿಗಳು ಒಳಗೊಂಡಿರುತ್ತವೆ.
BREAKING : ಹಾರಾಟಕ್ಕೆ ಸಿದ್ಧವಾದ ‘Fly91’ ವಿಮಾನ, ‘DGCA’ನಿಂದ ‘ಏರ್ ಆಪರೇಟರ್ ಪ್ರಮಾಣಪತ್ರ’
ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ