ಬಳ್ಳಾರಿ: ಕಾಮಗಾರಿ ಬಿಲ್ ಪಾವತಿಸೋದಕ್ಕೆ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲಿ ಸಹಾಯಕ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಳ್ಳಾರಿಯಲ್ಲಿ ಬಿದ್ದಿದ್ದಾರೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿ ಸಣ್ಣ ನೀರಾವರಿ ಕಚೇರಿಯಲ್ಲಿ ಕಾಮಗಾರಿ ಬಿಲ್ 30 ಲಕ್ಷ ಪಾವತಿಗಾಗಿ, 2 ಲಕ್ಷಕ್ಕೆ ಸಹಾಯ ಇಂಜಿನಿಯರ್ ನಾಗರಾಜ್ ಬೇಡಿಕೆ ಇಟ್ಟಿದ್ದರು.
ಈ ಕುರಿತಂತೆ ಗುತ್ತಿಗೆದಾರ ರಾಮಕೃಷ್ಣ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಗುತ್ತಿಗೆದಾರ ರಾಮಕೃಷ್ಣ ಅವರಿಂದ 2 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ ಸಹಾಯಕ ಇಂಜಿನಿಯರ್ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಳ್ಳಾರಿ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದ್ದು, ಭ್ರಷ್ಟ ಅಧಿಕಾರಿ ಎಇ ನಾಗರಾಜ್ ಮನೆಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಅಂದಹಾಗೇ ಎಇ ನಾಗರಾಜ್ ಕಾಮಗಾರಿ ಬಿಲ್ ಪಾವತಿಗಾಗಿ ಕಳೆದ ಮೂರು ತಿಂಗಳಿನಿಂದ ಸತಾಯಿಸುತ್ತಿದ್ದರು. ಆರಂಭದಲ್ಲಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಆನಂತ್ರ 2 ಲಕ್ಷಕ್ಕೆ ಬೇಡಿಕೆಯಿಟ್ಟು ಇಂದು 2 ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ದಾಳಿಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
BREAKING : ಹಾರಾಟಕ್ಕೆ ಸಿದ್ಧವಾದ ‘Fly91’ ವಿಮಾನ, ‘DGCA’ನಿಂದ ‘ಏರ್ ಆಪರೇಟರ್ ಪ್ರಮಾಣಪತ್ರ’
ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ