ಬೆಳಗಾವಿ : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆ ಯಾಗಿರುವ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಇತರೆ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಲ್ಲದೆ ಎಸ್ ಪಿ ಪಿ ಕಾಯ್ದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
‘ಉಕ್ರೇನ್’ ಯುದ್ಧ ಭೂಮಿಯಲ್ಲಿ ಭಾರತೀಯ ಬಲಿ : ‘ಕನ್ನಡಿಗರಲ್ಲಿ’ ಹೆಚ್ಚಾದ ಆತಂಕ
ಬೆಳಗಾವಿಯ ಸುವರ್ಣ ಸಹೋದರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್ಪಿಪಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಹೇಳಿಕೆ:’ಹೆಚ್ಚು ಜಾಗರೂಕರಾಗಿರುವಂತೆ’ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸಲಹೆ
ರೈತರಿಗೆ ತಲಾ 2 ಸಾವಿರ ರೂ.ಗಳಂತೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 631 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂ. ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ ನೀಡಲಾಗಿದೆ.
ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಒಟ್ಟಾರೆ 18,171 ಕೋಟಿ ಬೆಳೆ ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದ್ರೆ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.