ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಯಾಗಬೇಕು ಎಂದು ಈಗಾಗಲೇ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಜನರು ಹಾರೈಸುತ್ತಿದ್ದಾರೆ. ಈ ಮಧ್ಯೆ 102 ವರ್ಷದ ವಿರುದ್ಧ ಒಬ್ಬರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ.
370 ನೇ ವಿಧಿಯ ನಂತರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ: ಬಿಗಿ ಭದ್ರತೆ
ಹೌದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಪಾರ್ವತಮ್ಮ ಎನ್ನುವ 102 ವರ್ಷದ ಹೃದಯ ಒಬ್ಬರು ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕೆಂದು ಹಾರೈಸಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ಮಾದಪ್ಪನ ದರ್ಶನಕ್ಕೆ 18 ಕಿಲೋಮೀಟರ್ ಕಾಲ್ನಡಿಗೆ ಮೂಲಕ ಶತಾಯುಷಿ ಅಜ್ಜಿ ಕ್ರಮಿಸಿದ್ದಾರೆ.
ಧಾರವಾಡ : ಮದುವೆ ಮಂಟಪದಲ್ಲಿ ’35 ಲಕ್ಷ’ ಮೌಲ್ಯದ ಚಿನ್ನಾಭರಣ ಕದ್ದ ಖದೀಮ : ಪ್ರಕರಣ ದಾಖಲು
ದೇಶಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಒಳ್ಳೆಯದಾಗಬೇಕು. ಮಳೆ, ಬೆಳೆ ಚೆನ್ನಾಗಿ ಆಗಬೇಕು. ಹಾಗೆ ಆದರೆ ಅಲ್ಲವೇ ರೈತರಿಗೆ ಒಳಿತಾಗುವುದು? ಅದೇ ರೀತಿ ಕಾಡು ಪ್ರಾಣಿಗಳಿಗೂ ಒಳ್ಳೆಯದಾಗಬೇಕು. ಅವುಗಳಿಗೆ ಕುಡಿಯುವ ನೀರು ದೊರೆಯುವಂತಾಗಬೇಕು. ಈ ಎಲ್ಲ ಬೇಡಿಕೆಗಳನ್ನು ದೇವರ ಮುಂದಿಟ್ಟುಕೊಂಡು ಮಹದೇಶ್ವರನ ದರ್ಶನಕ್ಕೆ ಬರುತ್ತಿದ್ದೇನೆ ಎಂದು ಪಾರ್ವತಮ್ಮ ಹೇಳಿದ್ದಾರೆ.
‘ಮಹಾಶಿವರಾತ್ರಿ’ ಉತ್ಸವದಲ್ಲಿ ಪಾಲ್ಗೊಳ್ಳಲು 62 ಹಿಂದೂಗಳು ಭಾರತದಿಂದ ಪಾಕಿಸ್ತಾನಕ್ಕೆ ಪ್ರಯಾಣ