ಬೆಂಗಳೂರು: ಅನಧಿಕೃತವಾಗಿ ಗರ್ಭಪಾತ ಮಾಡಿಸುವುದು ಕಾನೂನು ಬಾಹಿರವಾಗಿದೆ. ಹೀಗಿದ್ದೂ ನಿಯಮ ಮೀರಿ 74 ಗರ್ಭಪಾತ ಮಾಡಿದಂತ ನೆಲಮಂಗಲದ ಆಸರೆ ಆಸ್ಪತ್ರೆಯ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಆಸ್ಪತ್ರೆಗೆ ಬಂದ್ ಮಾಡಿಸಿ ಬೀಗ ಜಡಿದಿದ್ದಾರೆ.
ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಪಡೆದಂತ ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮತ್ತೊಂದೆಡೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿದ್ದಂತ ಶಸ್ತ್ರಚಿಕಿತ್ಸಾ ಕಡತವನ್ನು ಆರೋಗ್ಯ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ನೆಲಮಂಗಲದ ಬಿ.ಎಚ್. ರಸ್ತೆಯಲ್ಲಿರುವ ಆಸರೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಈ ಕೃತ್ಯ ನಡೆಸಿರುವುದು ಗೊತ್ತಾಯಿತು.
2021ರ ಸೆಪ್ಟೆಂಬರ್ 17ರಿಂದ 2026ರ ಸೆಪ್ಟೆಂಬರ್ 16ರವರೆಗೆ ಕೆಪಿಎಂಇ ಪ್ರಾಧಿಕಾರದಿಂದ ಪರವಾನಗಿ ಪಡೆದುಕೊಂಡು ಆಸ್ಪತ್ರೆ ನಡೆಸಲಾಗುತ್ತಿದೆ. ಎಂಟಿಪಿ ಕಾಯ್ದೆ ಅಡಿಯಲ್ಲಿ ಪರವಾನಗಿ ಪಡೆಯದೆ ಗರ್ಭಪಾತ ನಡೆಸಲಾಗಿದೆ. ಇದು ವೈದ್ಯಕೀಯ ಗರ್ಭಪಾತ ಕಾಯ್ದೆ–1971 ಅನ್ನು ಉಲ್ಲಂಘಿಸಲಾಗಿದೆ ಎಂದು ದೂರು ನೀಡಿದ್ದರಿಂದ ಆಸರೆ ಆಸ್ಪತ್ರೆ ವೈದ್ಯ ಹಾಗೂ ಮಾಲೀಕ ಡಾ.ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಬೆನ್ನಲ್ಲೇ ಇಂದು ನೆಲಮಂಗಲ ನಗರದಲ್ಲಿರುವಂತ ಆಸರೆ ಆಸ್ಪತ್ರೆಯನ್ನು ಪೊಲೀಸರು ಬಂದ್ ಮಾಡಿಸಿ, ಸೀಜ್ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಬೆಚ್ಚಿ ಬೀಳಿಸಿದ್ದಂತ 74 ಭ್ರೂಣ ಹತ್ಯೆ ಮಾಡಿದ್ದಂತ ಆಸ್ಪತ್ರೆಯನ್ನು ಬಂದ್ ಮಾಡಿದ್ದಾರೆ.
‘ಪಾಕಿಸ್ತಾನ’ ಪರ ಘೋಷಣೆ ಕೇಸ್ : ಬಂಧಿತ ‘ಮೊಹಮ್ಮದ ಶಫಿ ನಾಶಿಪುಡಿ’ ಕೋರ್ಟ್ ಗೆ ಹಾಜರು
‘ಪುನೀತ್ ರಾಜಕುಮಾರ್’ ಹೆಸರಲ್ಲಿ ರಾಜ್ಯಾದ್ಯಂತ ‘ಹೃದಯ ಜ್ಯೋತಿ’ ಯೋಜನೆ ಪ್ರಾರಂಭ : ದಿನೇಶ್ ಗುಂಡೂರಾವ್