ಹುಬ್ಬಳ್ಳಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇತ್ತೀಚಿಗೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದಾರೆ ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ತಿಂಗಳು ಕಳೆದ ಮೇಲೆ ಶೆಟ್ಟರ್ ಅವರಿಂದ ಪಶ್ಚಾತ್ತಾಪದ ಹೇಳಿಕೆ ಹೊರಬರುತ್ತೆ ನೋಡ್ತಾ ಇರಿ ಎಂದು ತಿಳಿಸಿದ್ದಾರೆ.
ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ ಸತತ 9 ಗಂಟೆ ಪರಿಶೀಲನೆ ನಡೆಸಿದ ‘NIA’
ಹುಬ್ಬಳ್ಳಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎಂಬ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ ಬಗ್ಗೆ ಕೇಳಿದಾಗ, ಈ ತಿಂಗಳು ಕಳೆದ ಮೇಲೆ ಶೆಟ್ಟರ್ ಅವರಿಂದ ಪಶ್ಚಾತ್ತಾಪದ ಹೇಳಿಕೆ ಹೊರಬರುತ್ತೆ ನೋಡ್ತಾ ಇರಿ. ಬಿಜೆಪಿಯಲ್ಲಿ ಅವರನ್ನು ಕಡೆಗಣಿಸಲಾಗಿತ್ತು ಎಂದು ಹೇಳಿದರು.
ಶಿವಮೊಗ್ಗ: ಕುವೆಂಪು ವಿವಿಯ ನೂತನ ‘ಕುಲಪತಿ ಪ್ರೊ.ಶರತ್ ಅನಂತಮೂರ್ತಿ’ ಅಧಿಕಾರ ಸ್ವೀಕಾರ
ಆದರೆ ನಾವು ಅವರನ್ನು ಕರೆತಂದು ಟಿಕೆಟ್ ನೀಡಿದೆವು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆವು. ಆದರೂ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಅವರು ಪಶ್ಚಾತ್ತಾಪ ಪಡಲಿದ್ದಾರೆ ಎಂದು ಹೇಳಿದರು.
ಮಾ.9ರಂದು ‘ರಾಜ್ಯ ಸರ್ಕಾರ’ದಿಂದ ‘ರೈತ ಸೌರಶಕ್ತಿ ಮೇಳ’ ಆಯೋಜನೆ: ಏನಿರುತ್ತೆ ಗೊತ್ತಾ? ಇಲ್ಲಿದೆ ಡೀಟೆಲ್ಸ್
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೇಳಿದಾಗ, ಕೇವಲ ಇಬ್ಬರು ಮೂವರಲ್ಲ, ಬಿಜೆಪಿಯಿಂದ ಅನೇಕ ಜನ ಕಾಂಗ್ರೆಸ್ಗೆ ಆಗಮಿಸಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. ಬಿಜೆಪಿಯಲ್ಲಿದ್ದು ಯಾವುದೇ ಪ್ರಯೋಜನವಿಲ್ಲ ಎಂಬ ಅರಿವು ಅನೇಕರಿಗೆ ಆಗಿದೆ. ಹೀಗಾಗಿ ಕಾಂಗ್ರೆಸ್ನತ್ತ ಮುಖ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಿದರು.